ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದಿನ ವಾರ ಹೊಸ ಆದಾಯ ತೆರಿಗೆ ಬಿಲ್ ಮಂಡಿಸುವುದಾಗಿ ತಮ್ಮ ಬಜೆಟ್ (Budget) ಭಾಷಣದಲ್ಲಿ ಘೋಷಿಸಿದ್ದಾರೆ.
ದಾಖಲೆಯ 8ನೇ ಬಾರಿಗೆ ಬಜೆಟ್ (Budget) ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಿರುವ ವಿತ್ತ ಸಚಿವರು ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ ಮಾಡಲಾಗುತ್ತದೆ. ಈ ಮಸೂದೆ ಕೆವೈಸಿ ನಿಯಮಗಳ ಸರಳೀಕರಣ ಮಾಡುತ್ತದೆ ಎಂದು ತಿಳಿಸಿದ್ಧಾರೆ.
ಇದಲ್ಲದೆ ಕಿಸಾನ್ ಕ್ರೆಡಿಟ್ ಕಾರ್ಡ್ನಲ್ಲಿ ಸಾಲದ ಮಿತಿಯನ್ನು 3ರಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದ್ದು, ಈ ವಿಚಾರವನ್ನು ವಿತ್ತ ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಮೇಕ್ ಇಂಡಿಯಾ ಉತ್ತೇಜಿಸುವ ಸಲುವಾಗಿ ವಿತ್ತ ಸಚಿವರು ಭರಪೂರ ಯೋಜನೆಗಳನ್ನು ಘೋಷಿಸಲಾಗಿದ್ದು, ಪ್ರತ್ಯೇಕ ಅನುದಾನವನ್ನು ಮೀಸಲಿಡಲಾಗಿದೆ.