Prakash Javadekar 
ನ್ಯೂಸ್

ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ...

ನವದೆಹಲಿ: ಕಾಂಗ್ರೆಸ್ ಸರ್ಕಾರದ ಪತನದ ನಂತರ ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಅನುನೋದನೆ ನೀಡಿದೆ.

ಸಭೆ ಬಳಿಕ ಈ ವಿಷಯ ತಿಳಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಪುದುಚೇರಿಯಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ವಿಧಾನಸಭೆಯಲ್ಲಿ ಬಹುಮತ ಸಾಭೀತಪಡಿಸಲು ಯಾರೋಬ್ಬರು ಯಶಸ್ವಿಯಾಗಿರಲಿಲ್ಲ. ಹೀಗಾಗಿ ಲೆಪ್ಟಿನಂಟ್ ಗವರ್ನರ್ ವಿಧಾನಸಭೆ ವಿಸರ್ಜಿಸಲು ಸೂಚಿಸಿದ್ದರು. ಅದರಂತೆ ಇಂದು ವಿಧಾನಸಭೆ ವಿಸರ್ಜಿಸಿ ರಾಷ್ಟ್ರಪತಿ ಆಡಳಿತ ನಡೆಸಲು ಅನುಮೋದನೆ ನೀಡಿದ್ದೇವೆ. ರಾಷ್ಟ್ರಪತಿಯವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವಾಸಮತ ಸಾಭೀತಪಡಿಸಲು ಲೆಪ್ಟಿನಂಟ್ ಗವರ್ನರ್ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆ 22 ರ ಸಂಜೆ 5 ಗಂಟೆಗೆ ಸಮಯ ನಿಗದಿ ಮಾಡಿದ್ದರು. ಆದರೆ, ವಿಶ್ವಾಸಮತ ಸಾಭೀತುಪಡಿಸಲು ಕಾಂಗ್ರೆಸ್ ವಿಫಲವಾಗಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಅವರು ರಾಜೀನಾಮೆ ನೀಡಿದ್ದರು. ವಿಧಾನಸಭೆಯಲ್ಲಿ ಕಾಂಗ್ರೆಸ್, ಡಿಎಂಕೆ 14 ಸ್ಥಾನಗಳನ್ನು ಹೊಂದಿದ್ದರೆ, ವಿರೋಧ ಪಕ್ಷಗಳು ಕೂಡ 14 ಸ್ಥಾನಗಳನ್ನು ಹೊಂದಿವೆ. ಇಬ್ಬರು ಕಾಂಗ್ರೆಸ್ ಶಾಸರು ಸೇರಿದಂತೆ ಮೂವರು ನಾಮನಿರ್ದೇಶಿತ ಶಾಸಕರು ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದಾರೆ.

33 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಡಿಎಂಕೆ ಮೈತ್ರಿಯ 17 ಶಾಸಕರು ಇದ್ದರೆ, (ನಾಮನಿರ್ದೇಶಿತರೂ ಸೇರಿದಂತೆ) ವಿರೋಧ ಪಕ್ಷದಲ್ಲಿರುವ ಬಿಜೆಪಿ, ಎಐಎಡಿಎಂಕೆ ಹಾಗೂ ಪಕ್ಷೇತರರ ಸಂಖ್ಯೆ 16 ಇದೆ. ಜಾನ್ ಕುಮಾರ್ ಅವರ ರಾಜೀನಾಮೆ ಸಲ್ಲಿಸುವ ಮೂಲಕ ಕಾಂಗ್ರೆಸ್​ಗೆ ಸಂಕಷ್ಟಕ್ಕೆ ಒಳಗಾಗಿದೆ. ಇದೀಗ ವಿಧಾನಸಭೆ ಬಲ 28 ಕ್ಕೆ ಕುಸಿದಿದೆ.

ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ಆಪ್ತರಾಗಿದ್ದ ಜಾನ್ ಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಬರುವ ಮೇ ನಲ್ಲಿ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. (ಏಜೇನ್ಸಿಸ್)