ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣದಲ್ಲಿ ನಷ್ಟ ಅನುಭವಿಸಿದ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ಪರಿಹಾರ ಘೋಷಣೆ ಮಾಡಿದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್. ಡಿ. ಕುಮಾರಸ್ವಾಮಿ ಗಲಭೆಯಲ್ಲಿ ನಷ್ಟ ಅನುಭವಿಸಿದ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ಮಾಡುತ್ತೇನೆ. ವೈಯಕ್ತಿಕವಾಗಿ ನಾನು ಪರಿಹಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ಇಂದು ನಾಗಮಂಗಲಕ್ಕೆ ಭೇಟಿ ಕೊಟ್ಟ ಎಚ್.ಡಿ. ಕುಮಾರಸ್ವಾಮಿ, "ನನ್ನ ಕೈಯಲ್ಲಿ ಆದಷ್ಟು ಸಹಾಯ ಮಾಡ್ತೀನಿ. ಎಲ್ಲರಿಗೂ ಸಮಾನವಾಗಿ ಪರಿಹಾರ ನೀಡುತ್ತೇನೆ. ನಾನು ಎರಡು ಧರ್ಮದವರಿಗೂ ಸಹಾಯಹಸ್ತ ನೀಡುವೆ. ನಾಗಮಂಗಲ ಗಲಭೆಯಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರದಿಂದ 2 ಲಕ್ಷ ರೂಪಾಯಿವರೆಗೂ ಪರಿಹಾರ ವಿತರಣೆ ಮಾಡಲಿದ್ದೇನೆ" ಎಂದಿದ್ದಾರೆ.
ನಷ್ಟ ಆಧರಿಸಿ ಪರಿಹಾರ ವಿತರಿಸಿದ ಎಚ್ಡಿಕೆ, ಘಟನೆಯ ಸಂತ್ರಸ್ತರನ್ನು ಮಾಜಿ ಶಾಸಕ ಸುರೇಶ್ ಗೌಡ ನಿವಾಸಕ್ಕೆ ಕರೆಸಿಕೊಂಡು ಪರಿಹಾರ ವಿತರಣೆ ಮಾಡಿದ್ದಾರೆ. ಇದೇ ವೇಳೆ ಕಷ್ಟ ಕೇಳಿಕೊಂಡವರಿಗೂ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.