ನ್ಯೂಸ್

ಕೇಂದ್ರ ಸಚಿವ ವಿ.ಸೋಮಣ್ಣ ಮೈಸೂರು ಜಿಲ್ಲಾ ಪ್ರವಾಸ


ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಸೆ.13ರಂದು ಮೈಸೂರು ನಗರಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 8.30ಕ್ಕೆ ಸಚಿವ ವಿ.ಸೋಮಣ್ಣ ಅವರನ್ನು ಮಣಿಪಾಲ್ ಆಸ್ಪತ್ರೆ (ಕೊಲಂಬಿಯಾ ಏಷ್ಯಾ) ಬಳಿ ಬಿಜೆಪಿ ಮುಖಂಡರು ಮತ್ತು ಸೋಮಣ್ಣ ಅವರ ಅಭಿಮಾನಿಗಳು ಸ್ವಾಗತಿಸಲಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿ.ಸೋಮಣ್ಣ ಅಭಿಮಾನಿ ಬಳಗದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.13ರಂದು ಮೈಸೂರು ನಗರಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮೊದಲಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 10.15ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸೋಮಣ್ಣ ಅವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಗುತ್ತದೆ.
ಬಳಿಕ ರೈಲ್ವೆ ನಿಲ್ದಾಣ, ಅಶೋಕಪುರಂ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಡಿಆರ್‌ಎಂ ಕಚೇರಿಯಲ್ಲಿ ರೈಲ್ವೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಂಜನಗೂಡಿಗೆ ಭೇಟಿ ಶ್ರೀಕಂಠೇಶ್ವರನ ದರ್ಶನ ಪಡೆಯಲಿದ್ದಾರೆ. ಸಂಜೆ 4.30ಕ್ಕೆ ಶ್ರೀ ಮಹಾದೇವ ತಾತಾ ಗದ್ದುಗೆಗೆ ಭೇಟಿ ನೀಡಿ, ದರ್ಶನ ಪಡೆದು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.