ಬೆಂಗಳೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ-2025ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು(Agricultural Sciences Universities Amendment Bill-2025 introduced in the Legislative Assembly).ಈ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ನೀಡಲಾಗಿತ್ತು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಇವುಗಳಿಂದ ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು, ವಿಸ್ತರಣಾ ಶಿಕ್ಷಣ ಘಟಕಗಳ, ಪ್ರಯೋಗಾಲಯ, ಗ್ರಂಥಾಲಯಕ,ವಿದ್ಯಾರ್ಥಿನಿಲಯಗಳು ಮುಂತಾದವುಗಳನ್ನು ವರ್ಗಾಯಿಸುವುದರ ಮೂಲಕ ಈ ವಿಶ್ವವಿದ್ಯಾಲಯ ಸ್ಥಾಪನೆ ಉದ್ದೇಶ ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ-2025ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಬೆಳೆಗಳ ಉತ್ಪಾದನೆಯ ಕ್ಷೇತ್ರದಲ್ಲಿ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣೆಯನ್ನು ನಡೆಸಲು ಮಂಡ್ಯ ವಿ.ಸಿ.ಾರ್ಮ್‌ನಲ್ಲಿ ಪ್ರತ್ಯೇಕ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಕ್ಕಾಗಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಅಧಿನಿಯಮ-2009(2010ರ ಕರ್ನಾಟಕ ಅಧಿನಿಯಮ 10)ನ್ನು ತಿದ್ದುಪಡಿ ಮಾಡಲು ಈ ವಿಧೇಯಕ ಮಂಡಿಸಲಾಗಿದೆ.