ನ್ಯೂಸ್

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸಲ್ಲಿಸಿದ್ದ ಜಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

ಸಿಆರ್‌ಪಿಸಿ 437 ಅಡಿ ಸೂರಜ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್‌ ರೇವಣ್ಣ ಅವರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದರು. ಕೋರ್ಟ್‌ ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿದ್ದು ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ.