ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಕಾರ್ಡ್ ಬಗ್ಗೆ ಸಿದ್ದಾಪುರ ಪಟ್ಟಣದಲ್ಲಿ ಶನಿವಾರ ಅರಿವು ಕಾರ್ಯಕ್ರಮ ಹಾಗೂ ನೋಂದಣಿ ನಡೆಯಿತು. 
ನ್ಯೂಸ್

ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಅರಿವು ಕಾರ್ಯಕ್ರಮ

ಎಂ.ರವಿ

ಸಿದ್ದಾಪುರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಕಾರ್ಡ್ ಬಗ್ಗೆ ಸಿದ್ದಾಪುರ ಪಟ್ಟಣದಲ್ಲಿ ಅರಿವು ಕಾರ್ಯಕ್ರಮ ಶನಿವಾರ ನಡೆಯಿತು.

ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಪಿ.ಎಂ.ನಿಖಿಲ್ ಚಂದ್ರ ಅವರ ನೇತೃತ್ವದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅರಿವು ಮೂಡಿಸಿದರು. ನಗರದ ಬಸ್ ಹಾಗೂ ಆಟೋ ರಿಕ್ಷಾ ನಿಲ್ದಾಣಕ್ಕೆ ಭೇಟಿ ನೀಡಿ ಆಟೋರಿಕ್ಷಾ ಚಾಲಕರು, ತಲೆಹೊರೆ ಕಾರ್ಮಿಕರು ಹಾಗೂ ಬಸ್ ಚಾಲಕ, ನಿರ್ವಾಹಕ, ಸೇರಿದಂತೆ ಸರ್ವೀಸ್ ಸ್ಟೇಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ನೋಂದಣಿ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿದರು.