ವಾರಣಾಸಿ: ವಾರಣಾಸಿಯಲ್ಲಿರುವ ಪಂಚಪೀಠ ಗಳಲ್ಲೊಂದಾದ ಶ್ರೀ ಕಾಶಿ ಜಂಗಮವಾಡಿ ಮಠಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿ ನೀಡಿದ್ದರು.
ಕಾಶೀ ಪೀಠದ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ 36 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಯೋಗಿ ಆದಿತ್ಯನಾಥ ಗುರುಕುಲದ ಕೊಡುಗೆಯನ್ನು ಕೊಂಡಾಡಿದರು.
ಸಮಾರಂಭಕ್ಕೂ ಮುನ್ನ ಕಾಶೀ ಪೀಠದ ಕರ್ತೃ ಶ್ರೀ ಜಗದ್ಗುರು ವಿಶ್ವಾರಾಧ್ಯರಿಗೆ ಪೂಜೆ ಸಲ್ಲಿಸಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಂದ ಆಶೀರ್ವಾದ ಪಡೆದರು.