ಉತ್ತರಪ್ರದೇಶ: ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ಕಾರ್ಮಿಕನೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ, ಥಳಿಸಿ, ತಲೆ ಬೋಳಿಸಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಾಹಿಲ್ ಹಲ್ಲೆಗೊಳಗಾದ ವ್ಯಕ್ತಿ. ಈತನನ್ನು ಮರಕ್ಕೆ ಕಟ್ಟಿ, ತಲೆ ಬೋಳಿಸಿ ಬಲವಂತವಾಗಿ 'ಜೈ ಶ್ರೀ ರಾಮ್' ಘೋಷಣೆ ಕೂಗಿದ್ದಾರೆ.
ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಫೋನ್ ಕಳ್ಳತನದ ಶಂಕೆಯ ಮೇಲೆ ಮೂವರು ಯುವಕರು ಸೇರಿ ಸಾಹಿಲ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದಾರೆ. "ಜೈ ಶ್ರೀ ರಾಮ್" ಎಂದು ಕೂಗುವಂತೆ ಒತ್ತಾಯಿಸಿದರು. ಸಾಹಿಲ್‌ನ ತಲೆ ಬೋಳಿಸಲಾಗಿದೆ ಮತ್ತು ಮರಕ್ಕೆ ಕಟ್ಟಿಹಾಕಿದ್ದಾರೆ.
ಸಾಹಿಲ್‌ನ ತಂದೆ ಶಕೀಲ್ ಮಗನ ಮೇಲೆ ಹಲ್ಲೆ ಮಾಡಿದವರ ವಿರುದ್ಧವಾಗಿ ದೂರು ನೀಡಿದ್ದಾರೆ. ಆರೋಪಿಯೊಂದಿಗೆ ರಾಜಿ ಮಾಡಿಕೊಳ್ಳುವಂತೆ ಪೊಲೀಸರು ಕೇಳುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಕುಟುಂಬದಿಂದ ಬಂದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಕಾಕೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಗಜೇಂದ್ರ, ಸೌರಭ್ ಮತ್ತು ಧನ್ನಿ ಎಂದು ಗುರುತಿಸಲಾಗಿದೆ " ಎಂದು ಅವರು ಹೇಳಿದರು.
ಸಾಹಿಲ್‌ನ ತಂದೆ ಶಕೀಲ್ ಮಾತನಾಡಿ, ತನ್ನ ಮಗ ಮಧ್ಯಾಹ್ನ ಊಟಕ್ಕೆಂದು ಮನೆಗೆ ಹೋಗುತ್ತಿದ್ದಾಗ ಆರೋಪಿಗಳು ಆತನನ್ನು ಹಿಡಿದು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ನಮ್ಮ ಮನವಿಯನ್ನು ಯಾರೂ ಕೇಳುತ್ತಿಲ್ಲ, ನಮ್ಮನ್ನು ರಾಜಿ ಮಾಡಿಕೊಳ್ಳಲು ಕೇಳಲಾಗುತ್ತಿದೆ, ನಮಗೆ ಬೆದರಿಕೆ ಹಾಕಲಾಗುತ್ತಿದೆ. ನಮಗೆ ಇಲ್ಲಿ ಉಳಿಯಲು ಬಿಡಬೇಡಿ, ನಮಗೆ ನ್ಯಾಯ ಬೇಕು,’’ ಎಂದು ಕಣ್ಣೀರು ಹಾಕಿದ್ದಾರೆ.