ಲಕ್ನೋ: ಹೆತ್ತ ಮಗನೇ ತಾಯಿಯ ಮೇಲೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.
ವ್ಯಕ್ತಿ ತನ್ನ ತಾಯಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಕೋಲಿನಿಂದ ಹಲ್ಲೆ ನಡೆಸುತ್ತಿರುವುದು ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದು, ಆರೋಪಿ ಮಗನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆತನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯ ವರದಿಗಳ ಪ್ರಕಾರ, ಸೇಲಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖೈರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನ್ಯೂಸ್ 1ಇಂಡಿಯಾಟ್ವೀಟ್‌ನಿಂದ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ , ವೃದ್ಧೆ ತಾಯಿಯ ಮೇಲೆ ಮಗ ಕೋಲಿನಿಂದ ಹಿಂಬಾಲಿಸಿಕೊಂಡು ಹೋಗಿ ಹೊಡೆಯುತ್ತಿರುವುದನ್ನು ಕಾಣಬಹುದು.
ಯುಪಿ ಪೊಲೀಸರು ಮತ್ತು ಬುಲಂದ್‌ಶಹರ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದ್ದು, ದಯವಿಟ್ಟು ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಬರೆಯಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದರು ಪೊಲೀಸರು ಆರೋಪಿ ದುರ್ಗೇಶ್ ಶರ್ಮಾ ಎಂಬಾತನನ್ನು ವಿಡಿಯೋ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.