ನವದೆಹಲಿ: ಸಹಾಯಕ ಪ್ರಾಧ್ಯಾಪಕರು ಮತ್ತು ಇತರ 121 ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮೆಡಿಕಲ್ ಆಫೀಸರ್/ ರಿಸರ್ಚ್ ಆಫೀಸರ್-36, ಅಸಿಸ್ಟೆಂಟ್ ಇಂಜಿನಿಯರ್-3, ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್-60, ಸೀನಿಯರ್ ಸೈಂಟಿಫಿಕ್ ಆಫೀಸರ್-21, ಆರ್ಕಿಟೆಕ್ಟ್ ಗ್ರೂಪ್ ಎ-1 ಹುದ್ದೆಗಳಿವೆ.
ಅರ್ಹ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ಸೈಟ್ ಮೂಲಕ upsc.gov.in ನಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 13. ಸಂಪೂರ್ಣ ಸಲ್ಲಿಸಿದ ಆನ್‌ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ ಆಗಸ್ಟ್ 14 ಇರುತ್ತದೆ.