ನಾಗ್ಪುರ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಾಗ್ಪುರದ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ನಾಗ್ಪುರದಿಂದ 30 ಕಿಲೋಮೀಟರ್ ದೂರದಲ್ಲಿರುವ ಕನ್ಹಾನ್ ಪಟ್ಟಣ್ಣದಲ್ಲಿ 30 ವರ್ಷದ ವ್ಯಕ್ತಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.
ತಾನು ವಾಸವಿರುವ ಗ್ರಾಮದಲ್ಲಿ ವಿದ್ಯುತ್ ಕಡಿತಗೊಳಿಸಿದ್ದಕ್ಕೆ ಕೋಪಗೊಂಡ ಯುವಕ ದೇವೇಂದ್ರ ಫಡ್ನವೀಸ್ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಆಸ್ಟ್ರೇಲಿಯನ್ನರು ದ್ವೇಷಿಸುವ ಬ್ಯಾಟ್ಸ್ಮನ್ ಚೇತೇಶ್ವರ್ ಪೂಜಾರ! ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ವೇಗಿ
ತಡರಾತ್ರಿ 2 ಘಂಟೆ ಸುಮಾರಿಗೆ ನಾಗ್ಪುರ ಪೊಲೀಸ್ ಕಂಟ್ರೋಲ್ ರೂಮಿಗೆ ಕರೆ ಮಾಡಿದ ಆರೋಪಿಯೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿ ಕರೆಯನ್ನ ಸ್ಥಗಿತಗೊಳಿಸಿದ್ದಾನೆ.
ಕೂಡಲೇ ಸ್ಥಳಕ್ಕೆ ದೌಡಅಯಿಸಿದ ಬಾಂಬ್ ನಿಷ್ಕ್ರಿಯ ತಂಡ ಮತ್ತು ಶ್ವಾನ ದಳ ತಪಾಸಣೆ ನಡೆಸಿದಾಗ ಸ್ಥಳದಲ್ಲಿ ಯಾವುದೇ ಸ್ಪೋಟಕಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.