ನ್ಯೂಸ್

ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷ/ಉಪಾಧ್ಯಕ್ಷರ ಮೀಸಲು ಪ್ರಕಟ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ/ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸಿದೆ.
61 ನಗರಸಭೆ, 123 ಪುರಸಭೆ, 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ/ಉಪಾಧ್ಯಕ್ಷರನ್ನು ಚುನಾಯಿಸಲು ಮೀಸಲಾತಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇನ್ನು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ.