ನ್ಯೂಸ್

ಕರ್ನಾಟಕದ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪ ಬಳಕೆಗೆ ಸೂಚನೆ: ಧಾರ್ಮಿಕ ದತ್ತಿ ಇಲಾಖೆ ಆದೇಶ

ಬೆಂಗಳೂರು: ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ತಯಾರಿಸುವ ಎಲ್ಲ ಪ್ರಸಾದಗಳಲ್ಲೂ ಕಡ್ಡಾಯವಾಗಿ ನಂದಿನಿ ತಪ್ಪುವನ್ನೇ ಬಳಸುವಂತೆ ಆದೇಶ ನೀಡಿದೆ.

ಈ ಬಗ್ಗೆ ಅಧಿಸೂಚನೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಪಾಡುವಂತೆ ಸೂಚನೆ ನೀಡಿದೆ.