ಬೆಂಗಳೂರು: ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್‌ಅಧಿಕಾರ ಸ್ವೀಕರಿಸಿದ್ದಾರೆ. ಇವರು 2021ರಿಂದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.
ಈ ಹಿಂದೆ 2022 ರ ಅಕ್ಟೋಬರ್ ನಿಂದ ಒಂದು ವರ್ಷದ ಅವಧಿಗೆ ನಿರ್ದೇಶಕರಾಗಿಯೂ (ಹಣಕಾಸು) ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಆಗ ಉಕ್ರೇನ್ -ರಷ್ಯಾ ಸಂಘರ್ಷದ ಕಾರಣದಿಂದಾಗಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದ ಕೂಡಿದ್ದ ಕಾಲಘಟ್ಟವಾಗಿತ್ತು. ಈ ಸವಾಲಯಗಳನ್ನು ತಮ್ಮ ವೃತ್ತಿ ಜೀವನದಲ್ಲಿ ಸಮರ್ಪವಾಗಿ ನಿಭಾಯಿಸಿ ಸೈ ಎನಿಸಕೊಂಡಿದ್ದರು ಎಂದು ಸಂಸ್ಥೆಯ ಮುಖ್ಯಸ್ಥ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಮ್ಮ 35 ವರ್ಷಗಳ ವೃತ್ತಿಜೀವನದಲ್ಲಿ ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇವರ ಅಧಿಕಾರವಧಿಯಲ್ಲಿ, ಇಂಡಿಯನ್ ಆಯಿಲ್ ತನ್ನ ರಿಟೇಲ್ ಔಟ್‌ಲೆಟ್‌ಗಳನ್ನು ಹೊಂದಿ ಹೊಸ ಸ್ವರೂಪ ಪಡೆದುಕೊಂಡಿದೆ. ಅಲ್ಲದೆ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮುಖ್ಯಸ್ಥರ ಸ್ಥಾನ ಅಲಂಕರಿಸಿದ್ದಾಗ ಅಡುಗೆ ಅನಿಲ ಗ್ರಾಹಕರಿಗೆ ನೇರ ಸೌಲಭ್ಯ ವರ್ಗಾವಣೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.