ನ್ಯೂಸ್

3ರಂದು ವಾಲ್ಮೀಕಿ ಪುತ್ಥಳಿ ಅನಾವರಣ

ಎ. ಆರ್. ರಘುರಾಮ

ತಿ.ನರಸೀಪುರ : ತಾಲೂಕಿನ ಎಸ್.ಮೇಗಡಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಸೇವಾ ಅಭಿವೃದ್ಧಿ ಸಂಘದಿಂದ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಜ. 3ರಂದು ಆಯೋಜನೆಗೊಂಡಿದೆ.ಅಂದು ಮಧ್ಯಾಹ್ನ 3ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಹರಿಹರ ತಾಲೂಕು ರಾಜನಹಳ್ಳಿ ಮಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಪುತ್ಥಳಿ ಅನಾವರಣ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್ ಮತ್ತು ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ.