Kantara Completed one year: ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಸಿನಿಮಾದಲ್ಲಿ ನಟಿಸಿದ್ದಾರೆ. ಬಿಡುಗಡೆಗೂ ಮುನ್ನವೇ ಪ್ರಿಮಿಯರ್ ಶೋ ಮೂಲಕ ಕಾಂತಾರ ಜನಮನ್ನಣೆ ಗಳಿಸಿತ್ತು.
ಈ ಸಿನಿಮಾ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ‘ವರಾಹ ರೂಪಂ..’ ವಿಡಿಯೋ ಸಾಂಗ್ ರಿಲೀಸ್ ಮಾಡಲು ಹೊಂಬಾಳೆ ಫಿಲ್ಮ್ಸ್ ಪ್ಲ್ಯಾನ್ ಮಾಡಿಕೊಂಡಿದೆ.
‘ಕಾಂತಾರ’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಾಡಂತೂ ಜನಮನ್ನಣೆ ಗಳಿಸಿದ್ದು, ಅಭಿಮಾನಿಗಳು ವಿಡಿಯೋ ಸಾಂಗ್ ನೋಡಲು ಕಾದು ಕುಳಿತಿದ್ದಾರೆ. ಇದೀಗ ಇಂದಿಗೆ ಕಾಂತಾರ್ ಸಿನಿಮಾ ರಿಲೀಸ್ ಆಗಿ ಒಂದು ವರ್ಷ ಪೂರ್ಣಗೊಂಡಿದೆ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಹೌದು ಇಂದು (ಸೆ.30) ಕಾಂತಾರ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.
ಕಾಂತಾರ ಸಿನೆಮಾ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಗಳಿಕೆ ಮಾಡಿದ್ದು, ಇದೀಗ ವಿಡಿಯೋ ಸಾಂಗ್ ಒಂದು ವರ್ಷದ ಬಳಿಕ ರಿಲೀಸ್ ಆಗಲಿದೆ.