ನ್ಯೂಸ್

ಶೀಘ್ರದಲ್ಲಿಯೇ ಮದುವೆಯಾಗುತ್ತೇನೆ..ಹುಡುಗಿಯೂ ನಮ್ಮ ಸಂಬಂಧಿಕಳೇ: ವರ್ತೂರು ಸಂತೋಷ್​ .. Varthoor santosh wedding

ಬೆಂಗಳೂರು: ( Varthoor santosh wedding ) ಬಿಗ್​ಬಾಸ್​ 10 ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್​ ಅವರು ಮದುವೆಗೆ ಸಿದ್ಧರಾಗಿದ್ದು, ಹುಡುಗಿ ಯಾರು ಎಂದು ತಿಳಿಸಿದ್ದಾರೆ. ಈ ಕುರಿತಾದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಖಾಸಗಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ವರ್ತೂರು ಅವರು ಮಾತನಾಡಿ, ನನ್ನ ಜೀವನದಲ್ಲಿ ಏನಾಗಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ಅದೇನೋ ಹೇಳ್ತಾರಲ್ಲ, ಬಾಡಿ ಹೋದ ಬಳ್ಳಿಯಿಂದ ಹೂವು ಅರಳ ಬಲ್ಲದೇ...ಹಾಗೆ ಆಗಿದೆ ನನ್ನ ಜೀವನ ಎಂದಿದ್ದಾರೆ.

ನಾನು ಮುಂದಿನ ಹೆಜ್ಜೆ ಇಡುತ್ತಿದ್ದೇನೆ. ಮದುವೆಗೆ ಸಿದ್ಧನಾಗಿದ್ದೇನೆ. ಹುಡುಗಿಯೂ ನಮ್ಮ ಸಂಬಂಧಿಕಳೇ. ಅವಳ ಜೊತೆ ಒಡನಾಟವಿದೆ. ಶೀಘ್ರದಲ್ಲಿಯೇ  ಮದುವೆಯಾಗುತ್ತೇವೆ ಎಂದಿದ್ದಾರೆ ಸಂತೋಷ್​.

ನಾನು ಮದ್ವೆಯಾಗ್ತಿದ್ದೇನೆ ಎಂದು ಹೇಳಿದ ತಕ್ಷಣ ಮತ್ತೆ ತನಿಷಾ ಹೆಸರನ್ನು ಎಳೆದು ತರಬೇಡಿ. ಅವಳು ನನ್ನ ಫ್ರೆಂಡ್ ಅಷ್ಟೇ. ಈ ವಿಡಿಯೋ ನೋಡ್ತಿರೋರಿಗೆ ನಾನು ಸ್ಪಷ್ಟನೆ ಕೊಡುತ್ತಿದ್ದೇನೆ. ನಾನು ಮದ್ವೆಯಾಗ್ತಿರೋ ಹುಡುಗಿ ನನ್ನ ಸಂಬಂಧಿಕಳು.ಹುಡುಗನಿಗೆ ಹುಡುಗಿ ಇರಬೇಕು, ಹುಡುಗಿಗೆ ಹುಡುಗನೊಬ್ಬ ಇರಬೇಕು. ಅಂದ್ರೆ ಮಾತ್ರ ಜೀವನ ಆಗುವುದು. ಎಲ್ಲರಿಗೂ ಒಬ್ಬೊಬ್ಬರು ಇದ್ದೇ ಇರುತ್ತಾರೆ ಎಂದೂ ಹೇಳುವ ಮೂಲಕವಾಗಿ ಮದುವೆ ಕುರಿತಾಗಿ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಯುವತಿಯೊಬ್ಬರ ಜತೆ ವರ್ತೂರು ಸಂತೋಷ್​ ಇರುವ ಫೋಟೋ ಸೋಷಿಯಲ್​  ಮೀಡಿಯಾದಲ್ಲಿ ಹರಿದಾಡಿ ವರ್ತೂರು ಅವರಿಗೆ ಮದುವೆಯಾಗಿದ್ದರೂ ಆ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದೇ ಸದ್ದು ಮಾಡಿತು. ಪತ್ನಿಗೆ ಇವರು ಕಿರುಕುಳ ಕೊಟ್ಟಿದ್ದರಿಂದ ಅವರು ದೂರವಾಗಿದ್ದಾರೆ ಎಂಬೆಲ್ಲಾ ಆರೋಪ ಇವರ ಮೇಲೆ ಬಂದಿತ್ತು.

ಈ ಬಗ್ಗೆ ಬಿಗ್​ಬಾಸ್​​ನಿಂದ ಹೊರಕ್ಕೆ ಬಂದ ಮೇಲೆ ಸ್ಪಷ್ಟನೆ ಕೊಟ್ಟಿದ್ದರು ವರ್ತೂರು.  ನಾನು ಎಲ್ಲಿಯೂ ನನ್ನ ಮದ್ವೆಯಾಗಿಲ್ಲ ಎಂದು ಹೇಳಿಲ್ಲ.  ಈಗಲೂ ನನ್ನ ಮಾತು ಒಪ್ಪಿ ಬಂದರೆ ಪತ್ನಿಯನ್ನು ರಾಣಿಯಂತೆ ನೋಡಿಕೊಳ್ಳುತ್ತೇನೆ. ಎಲ್ಲೂ ಯಾರ ಮೇಲೂ ನಾನು ಆರೋಪ ಹೊರಿಸುತ್ತಿಲ್ಲ   ಕಾಲಾಯ ತಸ್ಮೈ ನಮಃ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು.