ನ್ಯೂಸ್

ವೀರಭದ್ರೇಶ್ವರ ಜಯಂತಿ ಆಚರಣೆ ಸೆ. 26ರಂದು

ರಾಣೆಬೆನ್ನೂರ: ಇಲ್ಲಿನ ವಾಗೀಶ ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಸೆ. 26ರಂದು ಬೆಳಗ್ಗೆ 9.30ಕ್ಕೆ ಶ್ರೀ ವೀರಭದ್ರೇಶ್ವರ ಜಯಂತಿ ಆಚರಿಸಲಾಗುವುದು.
ಅಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ವೀರಭದ್ರೇಶ್ವರ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಬಂದು ಸೇರುವುದು. ನಂತರ ಧರ್ಮಸಭೆ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಣ್ಣ ಮೋಟಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.