ಗುಜರಾತ್: ತಾಪಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಸುಮಾರು 20 ಜನರು ಗಾಯಗೊಂಡಿದ್ದಾರೆ.
ಪೋಖ್ರಾನ್ ಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮೊದಲು ಟ್ಯಾಂಕರ್ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಈ ಎಸ್ಟಿ ಬಸ್ಸು ಸೂರತ್ನಿಂದ ತಾಪಿ ಜಿಲ್ಲೆಯ ಉಕಾಯ್ ಮಾರ್ಗದಲ್ಲಿ ಬರುತ್ತಿತ್ತು. ಮೂರು ವಾಹನಗಳಡಿ ಸಿಲುಕಿದ್ದವರಲ್ಲಿ ಸುಮಾರು 20 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.