ನ್ಯೂಸ್

ಆ.21ರಿಂದ ಕಾಸಿಯಾದಲ್ಲಿ ‘ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ’

ಎನ್.ಎಲ್. ಶಿವಮಾದು

ಬೆಂಗಳೂರು: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ (ಎಂಎಸ್‌ಎಂಸಿ), ಕೈಗಾರಿಕೆ ಮತ್ತು ಮತ್ತು ವಾಣಿಜ್ಯ ಇಲಾಖೆ ಸಹಯೋಗದಲ್ಲಿ ಆ.21 ಮತ್ತು 22ರಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಸಭಾಂಗಣದಲ್ಲಿ ‘ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ’ ನಡೆಸಲಾಗುತ್ತಿದೆ.

ಈ ಕುರಿತು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಸಿಯಾ ಅಧ್ಯಕ್ಷ ಬಿ.ಆರ್. ಗಣೇಶ್ ರಾವ್, ವಿಜಯನಗರದ ಕಾಸಿಯಾ ಸಭಾಂಗಣದಲ್ಲಿ ಗುರುವಾರ ಬೆಳಗ್ಗೆ 10.30ಕ್ಕೆ ಕೇಂದ್ರ ಕೈಗಾರಿಕಾ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕಿ ಗುಂಜನ್ ಕೃಷ್ಣ ಭಾಗವಹಿಸಲಿದ್ದಾರೆ ಎಂದರು.

ಎಂಎಸ್‌ಎಂಇ ಒಂದೇ ವೇದಿಕೆಯಲ್ಲಿ ಎಚ್‌ಎಎಲ್, ಡಿಆರ್‌ಡಿಒ, ಬಿಎಚ್‌ಇಎಲ್ ಸೇರಿ ವಿವಿಧ ಸಾರ್ವಜನಿಕ ವಲಯದ 9 ಉದ್ಯಮಗಳು, ಬೃಹತ್ ಕೈಗಾರಿಕೆಗಳು, ಬಹುರಾಷ್ಟ್ರೀಯ ಕಂಪನಿಗಳು, ಮೂಲ ಪರಿಕರಗಳ ತಯಾರಕರು ತಮ್ಮ ಸೇವೆ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದೆ. ಇದೇ ವೇಳೆ ಸೂಕ್ತ ಮಾರುಕಟ್ಟೆ ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹ ನೀಡುವ ಮೂಲಕ ಸಣ್ಣ ಕೈಗಾರಿಕಾ ಉದ್ಯಮಗಳ ವ್ಯವಹಾರಗಳನ್ನು ಸುಗಮಗೊಳಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಸಿಯ ಪ್ರಧಾನ ಕಾರ್ಐದರ್ಶಿ ಎಸ್.ಎಂ. ಹುಸೇನ್, ಐಇಡಿಎಸ್ ಜಂಟಿ ನಿರ್ದೇಶಕ ದೇವರಾಜ್ ಕೆ., ಉಪಸ್ಥಿತರಿದ್ದರು.