ಬೆಂಗಳೂರು: ಹಿರಿಯ ನಟಿ ಕಿಶೋರಿ ಬಲ್ಲಾಳ್ ಇಂದು ನಿಧನರಾದರು. ಇತ್ತೀಚೆಗೆ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಅವರಿಗೆ ವಯೋಸಜಯ ಕಾಯಿಲೆಗಳೂ ಇದ್ದವು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು.
ಆಸ್ಪತ್ರೆಗೆ ದಾಖಲಾಗಿದ್ದ ಕಿಶೋರಿ ಬಲ್ಲಾಳ್, ಇಂದು ಶೇಖರ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.
70ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಕಿಶೋರಿ ಬಲ್ಲಾಳ್ ಕೆಲವು ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಶಾರುಖ್ಖಾನ್ ಅಭಿನಯದ ಹಿಂದಿ ಚಿತ್ರದ ಸ್ವದೇಸ್ನಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು.
'ಕಹಿ' ಕಿಶೋರಿ ಬಲ್ಲಾಳ್ ಅವರ ಕೊನೇ ಸಿನಿಮಾ. 1960ರಲ್ಲಿ ಸಿನಿಮಾ ಲೋಕ ಪ್ರವೇಶಿಸಿದ ಅವರು ಸುಮಾರು 15 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.