ನವದೆಹಲಿ; ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಇಂದು (ಆ.21) ಸಂಸತ್ ಭವನದ ಸಂಕೀರ್ಣದಲ್ಲಿ ನಾಮಪತ್ರ ಸಲ್ಲಿಸಿದರು.
ಇದನ್ನೂ ಓದಿ:ತನ್ನ ಗೆಳೆಯನನ್ನು 11 ಲಕ್ಷ ರೂ.ಗೆ ಮಾರಿದ ಗರ್ಲ್ಫ್ರೆಂಡ್! ಹುಡುಗರೇ, ಹುಷಾರ್… girl sell boyfriend
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಯ್ತು. ಜೊತೆಗೆ ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವತ್, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಹಾಜರಿದ್ದರು.
(ಏಜೆನ್ಸೀಸ್)
ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷದ ಮೈತ್ರಿಕೂಟದ ಸಭೆಯ ಬಳಿಕ ನ್ಯಾಯಮೂರ್ತಿ ರೆಡ್ಡಿ ಅವರ ಉಮೇದುವಾರಿಕೆಯನ್ನು ಘೋಷಿಸಿದರು. ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರನ್ನು ಭಾರತೀಯ ನ್ಯಾಯಶಾಸ್ತ್ರದಲ್ಲಿ "ಅತ್ಯುನ್ನತ ವ್ಯಕ್ತಿ" ಎಂದು ಪರಿಗಣಿಸಲಾಗಿದೆ. ಅವರ ತೀರ್ಪುಗಳು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯಕ್ಕಾಗಿ ದೃಢ ಸಮರ್ಪಣೆಗಾಗಿ ಗೌರವಿಸಲ್ಪಟ್ಟಿದ್ದಾರೆ.