ನ್ಯೂಸ್

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್​ಕರ್​ ದಿಢೀರ್​ ರಾಜೀನಾಮೆ! ಕಾರಣ ಹೀಗಿದೆ.. | Vice President

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್ ಧನ್​ಕರ್​ ಅವರು ಆರೋಗ್ಯ ಕಾರಣಗಳನ್ನು ನೀಡಿ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಧನಕರ್​​ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಆರೋಗ್ಯದ ಕಾಳಜಿ ಮತ್ತು ವೈದ್ಯಕೀಯ ಆರೈಕೆಗೆ ಆದ್ಯತೆ ನೀಡುವ ಅಗತ್ಯವನ್ನು ಉಲ್ಲೇಖಿಸಿದ್ದಾರೆ. ಸಂವಿಧಾನದ ಆರ್ಟಿಕಲ್ 67 (ಎ) ಅನುಸಾರ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ಹೇಳಿದ್ದೇನು?

ತಮ್ಮ ಪತ್ರದಲ್ಲಿ, ರಾಷ್ಟ್ರಪತಿಯವರ "ಅಚಲ ಬೆಂಬಲ" ಮತ್ತು ಅವರ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ "ಶಾಂತವಾದ, ಅದ್ಭುತವಾದ ಕೆಲಸದ ಸಂಬಂಧ" ಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ನನ್ನ ಅಧಿಕಾರದ ಅವಧಿಯಲ್ಲಿ ನಾನು ಬಹಳಷ್ಟು ಕಲಿತಿದ್ದೇನೆ. ಸಂಸತ್ ಸದಸ್ಯರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ಅವರ ನೆನಪಿನಲ್ಲಿ ಉಳಿಯುತ್ತದೆ ಎಂದು ಪತ್ರದಲ್ಲಿ ಉಲ್ಲೇಖಸಿದ್ದಾರೆ.(ಏಜೆನ್ಸೀಸ್​)