ನ್ಯೂಸ್

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು; ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ನಾಳೆ (ಜ.7) ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಆಗಮಿಸಿದ್ದಾರೆ.

ಎಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೆಂಕಯ್ಯನಾಯ್ಡು ಅವರನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೂಗುಚ್ಛ ನೀಡಿ, ಶಾಲು ಹೊದೆಸಿ ಸ್ವಾಗತಿಸಿದರು.