ನ್ಯೂಸ್

ಚಲಿಸುವ ಬೈಕ್‌ನಲ್ಲಿ ಡೇಂಜರಸ್ ರೊಮ್ಯಾನ್ಸ್! ಈ ಜೋಡಿಗೆ ಬಿತ್ತು 21 ಸಾವಿರ ರೂ. ದಂಡ

ಗಾಜಿಯಾಬಾದ್‌: ಚಲಿಸುವ ಬೈಕ್‌ನಲ್ಲಿ ದಂಪತಿ ತಬ್ಬಿಕೊಂಡು ಪ್ರಯಾಣಿಸುತ್ತಿರುವ ವಿಡಿಯೋ ವೈರಲ್​ ಆಗುತ್ತಿದ್ದಂತೆ, ಈ ಜೋಡಿ ಸಂಕಷ್ಟಕ್ಕೆ ಸಿಲುಕಿಕೊಂಡಿದೆ.

ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದ ಬಳಿ (NH9) ರಾಷ್ಟ್ರೀಯ ಹೆದ್ದಾರಿ 9ರಲ್ಲಿ ಚಲಿಸುವ ಬೈಕ್‌ನಲ್ಲಿ, ಬೈಕ್‌ನ ಇಂಧನ ಟ್ಯಾಂಕ್ ಮೇಲೆ ಕುಳಿತ ಯುವತಿ, ಬೈಕ್​ ಸವಾರನನ್ನು ತಬ್ಬಿಕೊಂಡಿದ್ದರು. ಈ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ.

ವಿಡಿಯೋದಲ್ಲಿ ಏನಿದೆ?: ಪುರುಷ ದ್ವಿಚಕ್ರ ವಾಹನವನ್ನು ಸವಾರಿ ಮಾಡುತ್ತಿರುವಾಗ ಮಹಿಳೆ ಬೈಕ್‌ನ ಪೇಟ್ರೋಲ್​​​​ ಟ್ಯಾಂಕ್ ಮೇಲೆ ತಬ್ಬಿ ಕುಳಿತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ದೃಶ್ಯಾವಳಿಗಳು ವೈರಲ್ ಆಗಿದ್ದು, ವಿಡಿಯೋಗೆ ಪ್ರತಿಕ್ರಿಯಿಸಿರುವ ಯುಪಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುವಂತೆ ಘಾಜಿಯಾಬಾದ್ ಪೊಲೀಸ್ ಘಟಕಕ್ಕೆ ಸೂಚಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ವರದಿಯಾಗಿದ್ದು, ಅಗತ್ಯ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಹೆಲ್ಮೆಟ್ ಧರಿಸದಿರುವುದು ಸೇರಿದಂತೆ ವಿವಿಧ ಉಲ್ಲಂಘನೆಗಳಿಗಾಗಿ ಗಾಜಿಯಾಬಾದ್ ಟ್ರಾಫಿಕ್ ಪೊಲೀಸರು ಈ ಜೋಡಿಗೆ 21 ಸಾವಿರ ರೂ. ದಂಡ ವಿಧಿಸಿದ್ದಾರೆ.