ನ್ಯೂಸ್

VIDEO VIRAL | ಕುಡಿದು ಕಾರು ಚಾಲನೆ ಮಾಡಿ ಅಪಘಾತ ಮಾಡಿದವನಿಗೆ ಮಹಿಳೆಯಿಂದ ಚಪ್ಪಲಿ ಏಟು!

ವಿಜಯಪುರ: ಈತ  ಕಾರನ್ನು ಕುಡಿದು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದ. ಅದರ ಪರಿಣಾಮವಾಗಿ ಅಪಘಾತವಾಗಿದ್ದು ಬೈಕ್​ ಹಾಗೂ ಆಟೋ ರಿಕ್ಷಾದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇದರಿಂದ ಸಿಟ್ಟಿಗೆದ್ದ ಮಹಿಳೆಯೊಬ್ಬರು ಕಾರಿನ ಬಳಿ ತೆರಳಿ ಚಾಲಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ನಶೆ ಇಳಿಸಿದ್ದಾರೆ!

ನಿನ್ನೆ ರಾತ್ರಿ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಮದ್ಯ ಸೇವಿಸಿ ನಶೆಯಲ್ಲಿದ್ದ ಕಾರು ಚಾಲಕ, ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಎರಡು ಅಟೋ ಹಾಗೂ ಒಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದ. ಈ ಘಟನೆಯಿಂದ ಒಂದು ಆಟೋ ಪಲ್ಟಿಯಾಗಿದ್ದು ಅದರಲ್ಲಿದ್ದ ಮಹಿಳೆ ಎದ್ದು ಬಂದು ಕಾರು ಚಾಲಕನಿಗೆ ಚಪ್ಪಲಿಯಿಂದ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

ಮಹಿಳೆಯಿಂದ ಕಾರು ಚಾಲಕನ ಥಳಿತದ ವಿಡಿಯೊ ಇಂದು ವೈರಲ್ ಆಗಿದ್ದು ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.