ಆಂಧ್ರಪ್ರದೇಶ: ಟಾಲಿವುಡ್ ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ತಮ್ಮ ಸಹೋದರನ ಹೊಸ ಚಿತ್ರಕ್ಕೆ ಶುಭಾಶಯ ತಿಳಿಸಿದ್ದು, ಸಿನಿಮಾ ಕುರಿತು ಮೆಚ್ಚಿ ಮಾತನಾಡಿದ್ದಾರೆ.
ಇದನ್ನೂ ಓದಿ: Chandrayaan-3 Mission Successful | Sriharikota: ನಭಕ್ಕೆ ಜಿಗಿದ ಬಾಹುಬಲಿ; ಚಂದ್ರಯಾನ-3 ಉಡಾವಣೆ ಯಶಸ್ವಿ
ಇಂದು ಹಲವು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಬೇಬಿ ಚಿತ್ರವು, ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಕಮಾಲ್ ಮಾಡಲಿದೆ ಎಂಬ ನಿರೀಕ್ಷೆಗಳು ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಪ್ರೀಮಿಯರ್ ಶೋ ವೀಕ್ಷಿಸಿದ ವಿಜಯ್ ದೇವರಕೊಂಡ, "ನಾನು ನಿಮಗೆ ಈ ಮಾತನ್ನು ಹೇಳಲು ಬಯಸುತ್ತೇನೆ, ನಿಮ್ಮೆಲ್ಲರನ್ನೂ ಬಹಳ ಪ್ರೀತಿಸುತ್ತೇನೆ ಮತ್ತು ಹೆಮ್ಮೆ ಪಡುತ್ತೇನೆ" ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಟಾಲಿವುಡ್ ಅಂಗಳದಲ್ಲಿ ಭರವಸೆಯನ್ನು ಮೂಡಿಸುತ್ತಿರುವ ಬೇಬಿ ಚಿತ್ರ, ಸದ್ಯ ಸಿನಿಪ್ರೇಕ್ಷಕರಿಂದ ಉತ್ತಮ ಅಭಿಪ್ರಾಯಗಳನ್ನು ಪಡೆದುಕೊಳ್ಳುತ್ತಿದೆ. ಚಿತ್ರದಲ್ಲಿ ವೈಷ್ಣವಿ ಚೈತನ್ಯ ಮತ್ತು ವಿರಾಜ್ ಅಶ್ವಿನ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಎಷ್ಟು ಗಳಿಕೆಯನ್ನು ಕಾಣಲಿದೆ ಎಂಬುದನ್ನು ಕಾದು ನೋಡಬೇಕಿದೆ,(ಏಜೆನ್ಸೀಸ್).