ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ವಿಜಯಲಕ್ಷ್ಮೀ ಅವರ ಇಂದು (ಮೇ 19) 22ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ. ಇನ್ನೂ ದಂಪತಿಗಳಿಬ್ಬರೂ ತಮ್ಮ ಆ್ಯನಿವರ್ಸರಿಯನ್ನ ಖಾಸಗಿ ಫೈವ್ ಸ್ಟಾರ್ ಪಬ್ ಒಂದರಲ್ಲಿ ಸೆಲಬ್ರೇಷನ್ ಮಾಡಿದ್ದಾರೆ. ಇದೇ ಸಂಭ್ರಮದಲ್ಲಿ ನಟ ದರ್ಶನ್ ವಿಜಯಲಕ್ಷ್ಮಿ ಜೊತೆ ಹಾಡಿ, ಕುಣಿದಿದ್ದಾರೆ. ವಾಮನ ಸಿನಿಮಾದ ಮುದ್ದು ರಾಕ್ಷಸಿ ಹಾಡಿಗೆ ಪತಿ ಪತ್ನಿ ಕ್ಯೂಟ್ ಡ್ಯಾನ್ಸ್ ಮಾಡಿದ್ದಾರೆ.
22ನೇ ವಿವಾಹ ವಾರ್ಷಿಕೋತ್ಸವ ಸಂಬಂಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿಯ ಜೊತೆಗೆ ನಿಂತುಕೊಂಡಿರೋ ಫೋಟೋವನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ (eternally) ಶಾಶ್ವತ ಅಂತ ಬರೆದುಕೊಂಡಿದ್ದಾರೆ.. ಅಭಿಮಾನಿಗಳು ಈ ಜೋಡಿಯ ಫೋಟೋಗೆ ಮೆಚ್ಚುಗೆ ಸೂಚಿಸಿ ಶುಭಕೊರಿದ್ದಾರೆ.
ಕಳೆದ ವರ್ಷ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ದಂಪತಿ ದುಬೈನಲ್ಲಿ ಬಹಳ ಅದ್ದುರಿಯಾಗಿ ತಮ್ಮ 21ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಈ ವರ್ಷ ಅವರು ರೆಸಾರ್ಟ್‌ವೊಂದರಲ್ಲಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಆ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
2003 ಮೇ 19ರಂದು ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಧರ್ಮಸ್ಥಳದ ವಸಂತ್ ಮಹಲ್‌ನಲ್ಲಿ ಮದುವೆಯಾಗಿದ್ದರು. ದರ್ಶನ್ ಹಾಗೂ ವಿಜಯಲಕ್ಷ್ಮಿ ಇಬ್ಬರ ಮದುವೆ ಆಮಂತ್ರಣ ಪತ್ರ ಕೂಡ ವೈರಲ್ ಆಗಿದೆ. ವಿಜಯಲಕ್ಷ್ಮೀ ಕೆಮಿಕಲ್ ಇಂಜಿನಿಯರ್ ಪದವೀಧರೆ. ದರ್ಶನ್-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್.
(ಏಜೆನ್ಸೀಸ್)