ನ್ಯೂಸ್

ವಿಆರ್​ಎಲ್ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಹುಟ್ಟುಹಬ್ಬ: ವಿಜಯಾನಂದ ಚಿತ್ರತಂಡದಿಂದ ಟೀಸರ್ ಗಿಫ್ಟ್​

ಬೆಂಗಳೂರು: ವಿಆರ್​ಎಲ್ ಸಮೂಹದ ಅಧ್ಯಕ್ಷ ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ವಿಜಯಾನಂದ ಚಿತ್ರದ ಟೀಸರ್​ ಬಿಡುಗಡೆಯಾಗಿದೆ.

ಕನ್ನಡ, ತಮಿಳು, ತೆಲುಗು ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ಟೀಸರ್​ ಬಿಡುಗಡೆ ಮಾಡುವ ಮೂಲಕ ಡಾ. ವಿಜಯ ಸಂಕೇಶ್ವರ ಅವರ ಹುಟ್ಟುಹಬ್ಬಕ್ಕೆ ವಿಜಯಾನಂದ ಚಿತ್ರತಂಡ ಉಡುಗೊರೆಯನ್ನು ನೀಡಿದೆ. ಇಂದು ಬೆಳಗ್ಗೆ 10.5ಕ್ಕೆ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಟೀಸರ್​ ಬಿಡುಗಡೆಯಾಗಿದೆ.

ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರವನ್ನು ವಿಆರ್​ಎಲ್ ಪ್ರೊಡಕ್ಷನ್ಸ್​ನಡಿ ಆನಂದ್ ಸಂಕೇಶ್ವರ ಅವರು ನಿರ್ವಿುಸುತ್ತಿದ್ದಾರೆ. ‘ವಿಜಯಾನಂದ’ ಚಿತ್ರದಲ್ಲಿ ನಿಹಾಲ್, ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ಮುಂತಾದವರು ನಟಿಸಿದ್ದು, ಗೋಪಿಸುಂದರ್ ಸಂಗೀತ ಸಂಯೋಜಿಸಿದ್ದಾರೆ.

ಕನ್ನಡ ಟೀಸರ್​

ತೆಲುಗು ಟೀಸರ್​

ತಮಿಳು ಟೀಸರ್​

ಮಲಯಾಳಂ ಟೀಸರ್​