ನ್ಯೂಸ್

ದಿನ ಭವಿಷ್ಯ: ಈ ರಾಶಿಯವರು ಇಂದು ನಿಮ್ಮ ಕುಟುಂಬದವರಿಗೆ ಭರವಸೆ ಮೂಡಿಸುವಿರಿ

ಮೇಷ: ತೊಂದರೆ ತಾಪತ್ರಯಗಳು ದೂರವಾಗಿ ಮಾನಸಿಕ ನೆಮ್ಮದಿ. ಗೆಳೆಯರೊಂದಿಗೆ ನಿಮ್ಮ ಸಂತೋಷವನ್ನು ಹಂಚಿಕೊಳ್ಳಿ. ಶುಭಸಂಖ್ಯೆ: 2

ವೃಷಭ: ಹಿತಮಿತ ಮಾತುಗಳಿಂದ ಜನಮನವನ್ನು ಗೆಲ್ಲುತ್ತೀರಿ. ಜನಪ್ರತಿನಿಧಿಗಳಿಗೆ, ಮುಂದಾಳುಗಳಿಗೆ ವಿಶೇಷ ದಿನ. ತಾಳ್ಮೆ ಇರಲಿ. ಶುಭಸಂಖ್ಯೆ: 2

ಮಿಥುನ: ಬಹುದಿನದ ಬಯಕೆಯನ್ನು ಕುಟುಂಬದೊಂದಿಗೆ ಸಮಾಲೋಚಿಸಿ. ವ್ಯಾಪಾರ ಆರಂಭಿಸಲು ದೃಢ ನಿರ್ಧಾರ ತೆಗೆದುಕೊಳ್ಳಿ. ಶುಭಸಂಖ್ಯೆ: 4

ಕಟಕ: ನಕಾರಾತ್ಮಕ ಯೋಚನೆಯಿಂದ ದೂರವಿರಿ. ಹಳೇ ಯೋಜನೆಯನ್ನು ಕಾರ್ಯಗತಗೊಳಿಸಿ. ಆತ್ಮೀಯ ಸ್ನೇಹಿತನ ಭೇಟಿ. ಶುಭಸಂಖ್ಯೆ: 3

ಸಿಂಹ: ನಿಮ್ಮ ಜಾಣತನಕ್ಕೆ ಪುರಸ್ಕಾರ. ಮಿತಿಮೀರಿದ ಉತ್ಸಾಹದಿಂದ ತೊಂದರೆಯಾಗ ಬಹುದು, ಯೋಚಿಸಿ ಮುಂದುವರಿಯಿರಿ. ಶುಭಸಂಖ್ಯೆ: 4

ಕನ್ಯಾ: ಆತ್ಮವಿಶ್ವಾಸದಿಂದಿದ್ದರೆ ಯಶಸ್ಸು. ಪ್ರಭಾವಿಗಳೊಂದಿಗೆ ಸಂಪರ್ಕ ಬೆಳೆಯುತ್ತದೆ. ಇತಿ-ಮಿತಿ ಅರಿತು ನಿರ್ವಹಿಸಿ. ಶುಭಸಂಖ್ಯೆ: 5

ತುಲಾ: ಉದ್ದಿಮೆಗಳಿಗೆ ಸಂಬಂಧಿಸಿದಂತೆ ವಿಶೇಷ ವ್ಯಕ್ತಿಯ ಭೇಟಿ. ಅನಿರೀಕ್ಷಿತ ತಿರುವು. ಹಿರಿಯರ ಆರೋಗ್ಯದ ಕಡೆ ಗಮನ ವಹಿಸಿ. ಶುಭಸಂಖ್ಯೆ: 7

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಹಿಡಿತ ಇರಲಿ. ಗಮನಾರ್ಹವಾದ ಸಾಧನೆ ನಿಮ್ಮದಾಗಲಿದೆ. ದೂರ ಪ್ರಯಾಣದ ಸಾಧ್ಯತೆ. ಶುಭಸಂಖ್ಯೆ: 3

ಧನಸ್ಸು: ನಿಮ್ಮ ಕುಟುಂಬದವರಿಗೆ ಭರವಸೆ ಮೂಡಿಸುವಿರಿ. ನಟರಿಗೆ ಅನಾರೋಗ್ಯದ ಸಾಧ್ಯತೆ. ಸಂಗೀತಗಾರರಿಗೆ ವಿಶೇಷ. ಶುಭಸಂಖ್ಯೆ: 7

ಮಕರ: ಕೈಬಿಟ್ಟ ವ್ಯವಹಾರದಲ್ಲಿ ಅನಿರೀಕ್ಷಿತ ಯಶಸ್ಸು. ಮನೆಯಲ್ಲಿ ಶುಭ ಕಾರ್ಯಕ್ಕೆ ಚಾಲನೆ. ಹಣಕಾಸಿನ ವಿಚಾರದಲ್ಲಿ ಅಡಚಣೆ. ಶುಭಸಂಖ್ಯೆ: 4

ಕುಂಭ: ವಿದ್ಯಾಭ್ಯಾಸದಲ್ಲಿ ತೊಡಗಿರುವವರಿಗೆ ವಿಶೇಷ ಪ್ರಗತಿ. ಆತಂಕ ದೂರ. ಹೃದಯ ಸಂಬಂಧಿ ತೊಂದರೆ ಬರಬಹುದು. ಶುಭಸಂಖ್ಯೆ: 6

ಮೀನ: ಯಾವುದೇ ವಿಷಯದ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಿ. ಹೊಸ ವ್ಯಾಪಾರ ಪ್ರಾರಂಭಿಸುವವರಿಗೆ ಶುಭದಿನ. ಶುಭಸಂಖ್ಯೆ: 9

| ವೇ|| ಬ್ರ|| ಶ್ರೀ ದೇವದತ್ತ ಶರ್ಮಾ ಗುರೂಜಿ