SC-ST : ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಲು ಸಾಧ್ಯವಾಗದೆ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಕಾತೆಯಲ್ಲಿ ಹಂಚಿಕೊಂಡಿರುವ ವಿಜಯೇಂದ್ರ,'' ಚುನಾವಣೆ ಪೂರ್ವದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಕಾಂಗ್ರೆಸ್ ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಓಲೈಕೆ ರಾಜಕಾರಣಕ್ಕೆ ಕಟ್ಟುಬಿದ್ದು ಪರಿಶಿಷ್ಟರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದ್ದಾರೆ.''
ಇದನ್ನೂ ಓದಿ:ಸದಸ್ಯತ್ವ ಹೆಚ್ಚಿಸಲು ಅಭಿಯಾನಕ್ಕೆ ತೀರ್ಮಾನ
ಈ ನಿಟ್ಟಿನಲ್ಲಿ ರಾಜ್ಯದ ಎಸ್‍ಸಿ, ಎಸ್‍ಟಿ ಸಮುದಾಯಗಳ ಹಣವನ್ನು ದುರುಪಯೋಗ ಮಾಡುವ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ 14 ತಂಡಗಳನ್ನು ರಚಿಸಿ ಜನಾಂದೋಲನ ರೂಪಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ನ್ಯಾಯ ಒದಗಿಸುವ ವರೆಗೆ ಬಿಜೆಪಿ ಹೋರಾಟ ನಿರಂತರವಾಗಿ ನಡೆಸಲಿದೆ ಎಂದಿದ್ದಾರೆ.