ರಮೇಶ್ 
ನ್ಯೂಸ್

ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ

ಹೊಳೆನರಸೀಪುರ: ತಾಲೂಕಿನ ಹಳ್ಳಿಮೈಸೂರು ನಾಡಕಚೇರಿಯಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ ಎಂಬಾತ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಗುರುವಾರ ಮಧ್ಯಾಹ್ನ ಹಳ್ಳಿಮೈಸೂರು ಹೋಬಳಿ ಜೋಡಿಗುಬ್ಬಿ ವೃತ್ತದ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ ಜೋಡಿ ಗುಬ್ಬಿ ಗ್ರಾಮದ ವಾಸಿ ಮುದ್ದೇಗೌಡ ಎಂಬುವರು ಪೌತಿ ಖಾತೆ ಮಾಡಿಕೊಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು 3 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳಾದ ಚಂದ್ರಶೇಖರ್ ಮತ್ತು ಶಿಲ್ಪಾ ಅವರು ಸಿಬ್ಬಂದಿಯೊಂದಿಗೆ ದಾಳಿ ಮಾಡಿದ್ದು ಲಂಚದ ಹಣದ ಸಮೇತ ರಮೇಶ ಅವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಈ ಸಂಬಂಧ ಹಾಸನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.