ನ್ಯೂಸ್

ವಿರಾಟ್ ಹಿಂದು ಮಹಾಸಭಾ ಗಣಪತಿ ವಿಸರ್ಜನೆ ಅ. 2ರಂದು

Haveri - Kariyappa Aralikatti

ರಾಣೆಬೆನ್ನೂರ: ಇಲ್ಲಿಯ ಅಶೋಕ ವೃತ್ತದಲ್ಲಿ ಪ್ರತಿಷ್ಠಾಪಿಸಿರುವ ವಿರಾಟ್ ಹಿಂದು ಮಹಾಸಭಾ ಗಣಪತಿ ವಿಸರ್ಜನೆಯ ಶೋಭಾಯಾತ್ರೆ ಅ. 2ರಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ ಎಂದು ಸಮಿತಿಯ ಅಧ್ಯಕ್ಷ ಕೆಎಂಪಿ ಮಣಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಪತಿ ವಿಸರ್ಜನೆ ನಿಮಿತ್ತ ಸೆ. 30ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ಜರುಗಲಿದೆ. ಗಣಪತಿ ವಿಸರ್ಜನೆ ದಿನದಂದು ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಡಿಜೆ ವ್ಯವಸ್ಥೆ ಮಾಡಲಾಗಿದೆ. ದಾರಿಯುದ್ದಕ್ಕೂ ಅನ್ನಸಂತರ್ಪಣೆ, ನೀರಿನ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ಬಸವರಾಜ ಹುಲ್ಲತ್ತಿ, ಪರಮೇಶ ಗೂಳಣ್ಣನವರ, ಶಿವಪುತ್ರಪ್ಪ ದೇಸಾಯಿ, ಗಿರೀಶ ವಾಲಿಶೆಟ್ರ, ಜಗದೀಶ ಯಲಿಗಾರ, ಅನಿಲ ಸಿದ್ದಾಳಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.