ನ್ಯೂಸ್

ವಿಷ್ಣುವರ್ಧನ್​​ ಸಮಾಧಿ ತೆರುವು; ಕೇಳಲು ಸಾಕಷ್ಟು ಪ್ರಶ್ನೆಗಳಿವೆ: ಧ್ರುವ ಸರ್ಜಾ ಭಾವುಕ ಪೋಸ್ಟ್ | ​ Vishnuvardhan

ಬೆಂಗಳೂರು: ಹೈಕೋರ್ಟ್​ ಸೂಚನೆ ಮೇರೆಗೆ ಅಭಿಮಾನ್​​ ಸ್ಟುಡಿಯೋದಲ್ಲಿದ್ದ ದಿವಂಗತ ನಟ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಈ ಬಗ್ಗೆ ಅಭಿಮಾನಿಗಳು ಸೇರಿದಂತೆ ಕನ್ನಡ ಚಿತ್ರರಂಗ ಕಲಾವಿರು ದುಖ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಧ್ರುವ ಸರ್ಜಾ ಅವರು ದಿವಂಗತ ಡಾ.ವಿಷ್ಣುವರ್ಧನ್ ಅವರ ಸಮಾಧಿ ತೆರವುಗೊಳಿಸಿದ್ದನ್ನು ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಭಾವುಕ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು,'' ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ'' ಎಂದಿದ್ದಾರೆ.

ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು?, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ.. ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ ಎಂದಿದ್ದಾರೆ.

ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ, ಇದೆಲ್ಲದಕ್ಕೂ ಉತ್ತರ ನಾನು ಒಬ್ಬ ಕನ್ನಡಿಗನಾಗಿ ಒಬ್ಬ ಕಲಾವಿದನಾಗಿ ಈ ಒಂದು ಸಂದರ್ಭದಲ್ಲಿ ನಾನು ವಿಷ್ಣು ಸರ್ ಅಭಿಮಾನಿಗಳ ಜತೆ ಪ್ರಾಮಾಣಿಕವಾಗಿ ಇದ್ದೇನೆ.ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ ಜೈ ಕನ್ನಡಾಂಬೆ ವಿಷ್ಣು ದಾದಾ ಅಜರಾಮರ...ಎಂದು ಧ್ರುವ ಬರೆದುಕೊಂಡಿದ್ದಾರೆ.

ಅಭಿಮಾನ್ ಸ್ಟುಡಿಯೋ ಹಾಗೂ ವಿಷ್ಣುವರ್ಧನ್ ಅಭಿಮಾನಿ ಸಂಘದ ನಡುವೆ ಸಮಾಧಿ ಸ್ಥಳದ ಕುರಿತಾಗಿ ವಾದ-ವಿವಾದ ವರ್ಷಗಳಿಂದಲೂ ನಡೆಯುತ್ತಲೇ ಇದೆ. ಸಮಾಧಿ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವರ್ಷಗಳಿಂದಲೂ ವಿಷ್ಣು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಇದೀಗ, ಹೈಕೋರ್ಟ್​ ಸೂಚನೆ ಮೇರೆಗೆ ಸಮಾಧಿಯನ್ನು ತೆರವುಗೊಳಿಸಲಾಗಿದೆ.(ಏಜೆನ್ಸೀಸ್​)