ಪಾಕಿಸ್ತಾನದ ವಿರುದ್ಧ ಭಾರತದ 'ಆಪರೇಷನ್ ಸಿಂಧೂರ್' ನಂತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳೊಂದಿಗೆ ಪ್ರಧಾನಿ ನಡೆಸಿದ ಮೊದಲ ಪ್ರಮುಖ ಸಭೆ ಇದಾಗಿತ್ತು.
ನವದೆಹಲಿ: ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸುವಲ್ಲಿ ಸಹಕಾರಿ ಒಕ್ಕೂಟ ವ್ಯವಸ್ಥೆ, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಸುಸ್ಥಿರ ನಗರ ಯೋಜನೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (24) ನವದೆಹಲಿಯಲ್ಲಿ ನೀತಿ ಆಯೋಗ ಸಭೆ ನಡೆಸಿದರು.
ಇದನ್ನೂ ಓದಿ: ಜಗತ್ತಿನಲ್ಲಿ ಅತ್ಯಧಿಕ ಜನಸಂದಣಿ ತುಂಬಿದ 10 ನಗರಗಳ ಪೈಕಿ ಭಾರತದ ಈ ಸಿಟಿಯೂ ಟಾಪ್! | Crowded Cities
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿ ಹೊಂದಿದ ಭಾರತ ಪ್ರತಿಯೊಬ್ಬ ಭಾರತೀಯನ ಕನಸಾಗಿದ್ದು, ಪ್ರತಿಯೊಂದು ರಾಜ್ಯವು ಅಭಿವೃದ್ಧಿ ಹೊಂದಿದಾಗ ಮಾತ್ರ ಈ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಪ್ರತಿಪಾದಿಸಿದರು. ಎಲ್ಲಾ ರಾಜ್ಯಗಳಲ್ಲಿ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವತ್ತ ಅವರು ಒತ್ತು ನೀಡಿದರು. ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಂದು ತಂಡದ ಹಾಗೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಯೊಂದು ರಾಜ್ಯವು ಎಲ್ಲಾ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳೊಂದಿಗೆ ಕನಿಷ್ಠ ಒಂದು ಜಾಗತಿಕ ಗುಣಮಟ್ಟದ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ಹೇಳಿದರು.
(ಏಜೆನ್ಸೀಸ್)
ನಾವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬೇಕಾಗಿದೆ. ಟೀಂ ಇಂಡಿಯಾ ರೀತಿ ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಿದರೆ ಇದು ಸಾಧ್ಯ ಎಂದು ಹೇಳಿದರು. ವಿಕಸಿತ ಭಾರತ ನಿರ್ಮಾಣ ಮಾಡುವುದು ಪ್ರತಿಯೊಬ್ಬ ಭಾರತೀಯನ ಗುರಿಯಾಗಿದೆ. ರಾಜ್ಯಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದುತ್ತದೆ. ಇದು 140 ಕೋಟಿ ಭಾರತೀಯರ ಆಶಯವಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಎಲ್ಲಾ ಮುಖ್ಯಮಂತ್ರಿಗಳಿಗೆ ಭವಿಷ್ಯಕ್ಕೆ ಸಿದ್ಧವಾಗಿರುವ ನಗರಗಳನ್ನು ರಚಿಸುವ ಅಗತ್ಯತೆಯ ಬಗ್ಗೆ ತಿಳಿಸಿದರು. ಭಾರತೀಯ ನಗರಗಳ ಅಭಿವೃದ್ಧಿಯನ್ನು ನಾವೀನ್ಯತೆ ಮತ್ತು ಸುಸ್ಥಿರತೆಯಿಂದ ನಡೆಸಬೇಕು ಎಂದು ಹೇಳಿದರು.