ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ನ್ಯೂಸ್

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ ಭೇಟಿ

ನಾಪೋಕ್ಲು: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಹಾವಳಿಯಿಂದ ತೋಟಗಳಿಗೆ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ ಪೂವಯ್ಯ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅರಣ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಅವರು ಕೂಡಲೇ ಆನೆಗಳನ್ನು ಕಾಡಿಗೆ ಕಟ್ಟಬೇಕು ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡೀರ ವಿನೋದ್ ನಾಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಸಿ.ಇ.ಮೊಹಮ್ಮದ್ ಎಡಪಾಲ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಶರೀಫ್, ಶಾಫಿ, ಜಕ್ರಿಯ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.