ಶಿವಮೊಗ್ಗ: ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಭಾಭವನದಲ್ಲಿ ಜೂ.3ರಂದು ಬೆಳಗ್ಗೆ 10.30ಕ್ಕೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಸದಸ್ಯತ್ವ ಗುರುತಿನ ಚೀಟಿ ವಿತರಣೆ, ಸಾಂಪ್ರದಾಯಿಕ ಸಸ್ಯಾಹಾರಿ ಖಾದ್ಯಗಳ ಪ್ರಾತ್ಯಕ್ಷಿಕೆ ಮತ್ತು ಸಾಮಾನ್ಯ ಜ್ಞಾನದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ ಹೇಳಿದರು.
ಜಿಲ್ಲೆಯ 400 ಜನರಿಗೆ ಸದಸ್ಯತ್ವ ಗುರುತಿನ ಚೀಟಿ ನೀಡಲಾಗುವುದು. ಮನೆಯಲ್ಲೇ ಸಿದ್ಧಪಡಿಸಿದ ಖಾದ್ಯಗಳ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು. ಜತೆಗೆ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿದ್ದು, ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುವರು. ಮಾಜಿ ಸಚಿವ ಕಿಮ್ಮನೆ ರತ್ನಾಕರ, ಒಕ್ಕಲಿಗ ಸಂಘದ ಅಧ್ಯಕ್ಷ ಸಿ.ಜೆ.ಗಂಗಾಧರ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಹಾಪ್‌ಕಾಮ್ಸ್ ಜಿಲ್ಲಾಧ್ಯಕ್ಷ ಆರ್.ವಿಜಯಕುಮಾರ್, ಪ್ರಮುಖರಾದ ಡಾ. ಮುನಿರಾಜ್, ಎಚ್.ರಾಮಚಂದ್ರಪ್ಪ, ಎಂ.ಪ್ರಕಾಶ್, ಗೋವಿಂದೇಗೌಡ, ರಾಮಾನುಜಪ್ಪ, ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಇತರರಿರು. ಜಿಲ್ಲಾ ಘಟಕದ ಅಧ್ಯಕ್ಷೆ ಪ್ರತಿಮಾ ಡಾಕಪ್ಪ ಗೌಡ, ಪುಷ್ಪಲತಾ, ಶೋಭಾ ಜೈಕರ್ ಸುದ್ದಿಗೋಷ್ಠಿಯಲ್ಲಿದ್ದರು.