ನ್ಯೂಸ್

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: CM ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹದೇವಪುರ ಮತ್ತು ರಾಜಾಜಿನಗರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ಈ ಹಿನ್ನೆಲೆ ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದರು.

ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ!: ಅಶೋಕ್​​

ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ಈಗ ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಕರ್ನಾಟಕ್ಕೆ ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ನಾಕಾಣೆ! ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ನಿನ್ನೆ(ಜು.30) ವ್ಯಂಗ್ಯವಾಡಿದ್ದರು.