ನ್ಯೂಸ್

ಸರ್ಕಾರಿ ಶಾಲಾ ಕಟ್ಟಡದ ಗೋಡೆ ಕುಸಿತ: ಮೃತರ ಸಂಖ್ಯೆ 7ಕ್ಕೆ ಏರಿಕೆ : 28 ಮಕ್ಕಳಿಗೆ ಗಾಯ

ಸರ್ಕಾರಿ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಹಿನ್ನೆಲೆ 7 ಮಕ್ಕಳು ಮೃತಪಟ್ಟಿದ್ದಾರೆ ಮತ್ತು 28 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಮನೋಹರ್ ಥಾಣೆಯ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ. 6 ಮತ್ತು 7ನೇ ತರಗತಿಯ ಕಟ್ಟದ ಒಂದು ಗೋಡೆ ಕುಸಿದಿದೆ. ಶವಗಳು ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ಕುರಿತು ತನಿಖೆ ಆದೇಶಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕೊಗೊಳ್ಳವುದಾಗಿ ಜಿಲ್ಲಾಧಿಕಾರಿ ಶ್ರೀಸಿಂಗ್​ ಹೇಳಿದ್ದಾರೆ.

ಕಟ್ಟಡ ಕುಸಿದಾಗ ಶಿಕ್ಷಕರು ಮತ್ತು ಸಿಬ್ಬಂದಿ ಸದಸ್ಯರಲ್ಲದೆ ಸುಮಾರು 40 ಮಕ್ಕಳು ಆವರಣದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯರ ಆರೋಪ

ಶಾಲಾ ಕಟ್ಟಡದ ಸ್ಥಿತಿಯ ಬಗ್ಗೆ ತಹಶೀಲ್ದಾರ್ ಮತ್ತು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕೋಪಗೊಂಡ ಸ್ಥಳೀಯರು ಹೇಳಿದ್ದಾರೆ. ( ಏಜೆನ್ಸೀಸ್​)