ಬೆಂಗಳೂರು: ನೋಂದಾಯಿತವಲ್ಲದ ಮತ್ತು ನೋಂದಾಯಿಸಲಾಗಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಕಾಯ್ದೆ, ಕಾನೂನು ಹಾಗೂ ನಿಯಮಗಳನ್ನು ಉಲ್ಲಂಸಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅಂತಹ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವು ಎಂದು ನಗರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ನದೀಮ್ ಹೇಳಿದ್ದಾರೆ.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ನದೀಮ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಈ ಎಚ್ಚರಿಕೆ ನೀಡಿದ್ದಾರೆ.
ಹೊಸದಾಗಿ ನೋಂದಾಯಿಸಲು ಬಂದಂತಹ ಸಂದರ್ಭಗಳಲ್ಲಿ ದಾಖಲಾತಿಗಳು ಅಪೂರ್ಣ ಅಥವಾ ನಕಲಿ ಎಂಬುದು ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.
ಜಿಲ್ಲಾ ಸಲಹ ಸಮಿತಿಯ ಸದಸ್ಯ ಎಂ.ವಸಂತಕುಮಾರ್ ಮಾತನಾಡಿ, 2023-24ನೇ ಸಾಲಿನ ಕಾರ್ಯಕ್ರಮದ ಪ್ರಗತಿಯ ವರದಿ ಹಾಗೂ ಪಿ.ಸಿ. ಪಿಎನ್‌ಡಿಟಿ ನಗರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳ ವಿವರವಾದ ಮಾಹಿತಿಯನ್ನು ನೀಡಿದರು. ನಗರ ಜಿಲ್ಲೆಯಲ್ಲಿ ಆಗಸ್ಟ್ ಮಾಸನಲ್ಲಿ ಒಟ್ಟು 25 ಹೊಸ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ತಿಳಿಸಿದರು.