ಬೆಂಗಳೂರು; ರಾಜ್ಯ ರಾಜಧಾನಿಯಲ್ಲಿ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಚಾಲಕರಿಗಾಗಿ ಕಟ್ಟು-ನಿಟ್ಟಿನ ಹೊಸ ನಿಯಮವನ್ನು ಜಾರಿಗೆ ತಂದಿದೆ.
ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚಾಗಿದ್ದು, ಈ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ ಬಿಎಂಟಿಸಿಯಿಂದ ಚಾಲಕರಿಗೆ ವಿಶೇಷ ತರಬೇತಿಯನ್ನು ಸಹ ನೀಡಲಾಗುತ್ತದೆ. ಇದರಲ್ಲಿ ಯೋಗ ಮತ್ತು ಅಪಘಾತಗಳನ್ನು ತಡೆಯುವ ಬಗ್ಗೆ ಮಾರ್ಗದರ್ಶನ ಒದಗಿಸಲಾಗುತ್ತದೆ. ಜೊತೆಗೆ, ಮದ್ಯಪಾನ ಮಾಡುವುದು, ಪ್ರಯಾಣಿಕರಿಗೆ ಟಿಕೆಟ್ ನೀಡದೆ ಇರುವುದು ಮುಂತಾದ ಲೋಪಗಳಿಗೆ ಅಮಾನತು ಕ್ರಮ ಜರುಗಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.
ಈ ನಿಯಮದಲ್ಲಿ ಚಾಲಕರು ಎರಡು ಬಾರಿ ಅಪಘಾತವೆಸಗಿದರೆ, ಅವರನ್ನು ಕೆಲಸದಿಂದ ವಜಾಗೊಳಿಸಲಾಗುತ್ತದೆ. ಜೊತೆಗೆ ಬಸ್ ಚಾಲನೆ ಮಾಡುವಾಗ ಚಾಲಕ ಏನಾದರೂ ಮೊಬೈಲ್ ಬಳಕೆ ಮಾಡಿದ್ದು ಕಂಡುಬಂದಲ್ಲಿ ಅವರನ್ನು ತಕ್ಷಣದಿಂದಲೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ ಎಂಬ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ರಾಷ್ಟ್ರಪತಿ ಭವನದಲ್ಲಿ 'ದ್ರೌಪದಿ ಮುರ್ಮು' ಅವರನ್ನು ಭೇಟಿಯಾದ ಗಗನಯಾತ್ರಿ 'ಶುಭಾಂಶು ಶುಕ್ಲಾ'| Draupadi Murmu
(ಏಜೆನ್ಸೀಸ್)
ಹಾಗಾಗಿ ಈ ಎಲ್ಲಾ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡು ಬಿಎಂಟಿಸಿ ಈ ಹೊಸ ನಿಯಮವನ್ನು ಜಾರಿಗೆ ತರಲಿದೆ.
ಸೋಮವಾರ (ಆಗಸ್ಟ್ 12) ಬೆಳಗ್ಗೆ 9.25ರ ಸುಮಾರಿಗೆ ಹೆಬ್ಬಾಳ ಫ್ಲೈಓವರ್ ಮೇಲೆ ನಿಧಾನ ಗತಿಯಲ್ಲಿ ಏರ್ಪೋರ್ಟ್ನಿಂದ ಹೆಚ್ಎಸ್ಆರ್ ಲೇಔಟ್ ಕಡೆ ಬಸ್ ಹೋಗುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಮುಂಬದಿ ನಿಂತಿದ್ದ ನಾಲ್ಕು ಬೈಕ್ಗಳು ಹಾಗೂ 4 ಕಾರಿಗೆ ಡಿಕ್ಕಿ ಹೊಡೆದಿತ್ತು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಲ್ಲಿ ಸವಾರರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರು.
ಕಳೆದ ಕೆಲ ದಿನಗಳ ಹಿಂದೆ ಚಾಲಕನ ನಿಯಂತ್ರಣ ತಪ್ಪಿ ಬಿಎಂಟಿಸಿ ಬಸ್ಸೊಂದು ಕಾರು, ಬೈಕುಗಳಿಗೆ ಗುದ್ದಿ ಸರಣಿ ಅಪಘಾತ ಮಾಡಿರುವ ಘಟನೆ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಯಲ್ಲಿ ನಡೆದಿತ್ತು. ಬಸ್ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆಯಾಗಿದ್ದು, ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.