ನವದೆಹಲಿ: ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯ ಜಾಮಿಯಾ ಏರಿಯಾದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನಾ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಕೆಲವರು ರಾಜ್ಘಾಟ್ವರೆಗೆ ಸಿಎಎ ಮತ್ತು ಎನ್ಆರ್ಸಿ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದರು. ಈ ವೇಳೆ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹಿಮ್ಮುಖವಾಗಿ ಚಲಿಸುತ್ತಾ ಜಾಮಿಯಾ ಏರಿಯಾದ ಹೋಲಿ ಫ್ಯಾಮಿಲಿ ಹಾಸ್ಪಿಟಲ್ ಬಳಿ ಗುಂಡಿನ ದಾಳಿ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಹೋಲಿ ಫ್ಯಾಮಿಲಿ ಹಾಸ್ಪಿಟಲ್ಗೆ ದಾಖಲಿಸಲಾಗಿದೆ. (ಏಜೆನ್ಸೀಸ್)