ನ್ಯೂಸ್

ಬಿಜೆಪಿ ಯುವ ಮೋರ್ಚಾ ಪ್ರತಿಭಟನಾ ಜಾಥಾ ತಡೆಗೆ ಲಾಠಿ ಜಾರ್ಜ್​, ಅಶ್ರುವಾಯು ಪ್ರಯೋಗ, ಓರ್ವ ಕಾರ್ಯಕರ್ತ ಬಲಿ

ಸಿಲಿಗುರಿ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಅದನ್ನು ಹತ್ತಿಕ್ಕಲು ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಹಿರಿಯ ಕಾರ್ಯಕರ್ತ ಮೃತಪಟ್ಟಿದ್ಧಾರೆ. ಪ್ರತಿಭಟನೆಯ ಕುರಿತು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸರಣಿ ಟ್ವೀಟ್ ಮಾಡಿದ್ದು, ಮಮತಾ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ಯಾ ಚಲೋ ಪ್ರತಿಭಟನಾ ಜಾಥಾದಲ್ಲಿ ಬಿಜೆಪಿ ಕಾರ್ಯಕರ್ತರು ಬಹಳಷ್ಟು ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ತೇಜಸ್ವಿ ಸೂರ್ಯ ಅವರು ಇದಕ್ಕೆ ಸಂಬಂಧಿಸಿ ಫೋಟೋ, ವಿಡಿಯೋಗಳನ್ನು ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ಪಶ್ಚಿಮ ಬಂಗಾಳದ ಯುವ ಮೋರ್ಚಾ ಕಾರ್ಯಕರ್ತರಲ್ಲಿ ನೈತಿಕ ಬಲ ತುಂಬಿದ್ದಾರೆ. 

ಲಾಠಿ ಚಾರ್ಜ್​ನಲ್ಲಿ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ.ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನೂ ಪೊಲೀಸರು ಬಳಸಿದ್ದಾರೆ.ಪ್ರತಿಭಟನಾಕಾರರೂ ಪೊಲೀಸರಿಗೆ ಪ್ರತಿರೋಧ ತೋರಿದ್ದು, ಕೆಲವು ಪೊಲೀಸರೂ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಿಜೆಪಿಯ ಹಿರಿಯ ಕಾರ್ಯಕರ್ತ ಉಲೆನ್ ರಾಯ್ ಅವರ ಫೋಟೋವನ್ನು ಶೇರ್ ಮಾಡಿರುವ ತೇಜಸ್ವಿ ಸೂರ್ಯ ಅವರ ಟ್ವೀಟ್ ಸರಣಿ ಇಲ್ಲಿದೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..