ನ್ಯೂಸ್

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕಾಫಿ ಹೊಡೆಯಲು ಅವಕಾಶ ಮಾಡಿಕೊಡಲಾಗುವುದು ಎಂದ ಈ ಮಹಾನಾಯಕ!

ಚೆನ್ನೈ: ನಮ್ಮ ಪಕ್ಷ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಕಾಫಿ ಹೊಡೆಯಲು ಅವಕಾಶ ಮಾಡಿ ಕೊಡಲಾಗುವುದು ಎಂದು ಡಿಎಂಕೆ ಹಿರಿಯ ನಾಯಕ ಕೆಎಂ ನೆಹರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಿರುಚಿರಾಪಳ್ಳಿಯಲ್ಲಿ (ತಿರುಚ್ಚಿ) ಗುರುವಾರ ನಡೆದ ಚುನಾವಣೆ ಸಭೆಯಲ್ಲಿ ಮಾತನಾಡಿದ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಮಧ್ಯಪ್ರದೇಶ, ಬಿಹಾರ್ ಹಾಗೂ ಉತ್ತರ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಸಾಗುತ್ತಾರೆ. ಇದಕ್ಕೆ ಕಾರಣ, ಅಲ್ಲಿನ ವಿದ್ಯಾರ್ಥಿಗಳಿಗೆ ಕಾಫಿ ಹೊಡೆಯಲು ಅವಕಾಶ ಇದೆ ಎಂಬುದು ನನಗೆ ಗೊತ್ತು. ತಮಿಳುನಾಡಿನಲ್ಲಿ ನಾವು ಅಧಿಕಾರಕ್ಕೆ ಬಂದರೆ, ನೀಟ್ ಪರೀಕ್ಷೆಯಲ್ಲಿ ನಿಮಗೆ ಕಾಫಿ ಹೊಡೆಯಲು ಅವಕಾಶ ಮಾಡಿ ಕೊಡುತ್ತೇವೆ. ಚಿಂತಿಸಬೇಡಿ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ನಮ್ಮ ಹುಡುಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಸಾಗದಿದ್ದರೇ ನಾವು ಅಧಿಕಾರಕ್ಕೆ ಬಂದರೂ ಏನೂ ಪ್ರಯೋಜನ ಎಂದು ಅವರು ಪ್ರಶ್ನಿಸಿದ್ದಾರೆ. ನೆಹರು ಅವರ ಈ ಹೇಳಿಕೆ ವಿರೋಧಪಕ್ಷಗಳಿಗೆ ಅಸ್ತ್ರ ಕೊಟ್ಟಂತಾಗಿದೆ. ಈ ಹಿಂದೆ ಡಿಎಂಕೆ ಸರ್ಕಾರದ ಅವಧಿಯಲ್ಲಿ ನೆಹರು ಅವರು ಸಾರಿಗೆ ಸಚಿವರಾಗಿದ್ದರು.