ನ್ಯೂಸ್

ಆರೋಗ್ಯ ಸಚಿವ ಕೆ ಸುಧಾಕರ್ ವಿರುದ್ಧ ರಾಜ್ಯಾದ್ಯಂತ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನಿರ್ಧಾರ: ಕಾರಣ ಏನು?

ಬೆಂಗಳೂರು: ಆರೋಗ್ಯ ಸಚಿವ ಕೆ ಸುಧಾಕರ್ ಅವರು ಏಕ ಪತ್ನಿ ವೃತಸ್ಥರು ಯಾರೂ ಇಲ್ಲ ಎಂದು ನೀಡಿದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನೇ ಹುಟ್ಟಿಸಿದೆ.

ಈ ಬಗ್ಗೆ ಸುಧಾಕರ್ ವಿರುದ್ಧ ಕಾಂಗ್ರೆಸ್​ನಿಂದ ಮಾನನಷ್ಟ ಮೊಕದ್ದಮೆ ಹೂಡಲು ಚಿಂತಿಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲಾ ಕಾಂಗ್ರೆಸ್ ಶಾಸಕರುಗಳು ಅವರವರ ಕ್ಷೇತ್ರದಲ್ಲಿ ಸುಧಾಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಾನೂನು ತಜ್ಞರ ಅಂತಿಮ ಅಭಿಪ್ರಾಯ ಪಡೆದು. ಪ್ರತಿಯೊಬ್ಬ ಶಾಸಕರು ಅವರವರ ಕ್ಷೇತ್ರದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ವಕೀಲರ ಸಲಹೆ ಪಡೆಯುತ್ತೇವೆ. ಸುಧಾಕರ್ ವಿರುದ್ಧ ಕಾಂಗ್ರೆಸ್ ನಿಂದ ಮಾನನಷ್ಟ ಅಸ್ತ್ರ ಬಳಕೆ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?” ಎಂದು ಸುಧಾಕರ್​ ಕಿಡಿ ಕಾರಿದ್ದರು. ನಾನೂ ಸೇರಿದಂತೆ 224 ಶಾಸಕರ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನೂ ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ತಿಳಿಸಿದರು.

ಈ ವಿಷಯವನ್ನು ಸದನಲ್ಲಿ ಕೂಡ ಹೇಳಬೇಕು ಅಂದುಕೊಂಡಿದ್ದೆ.. ಮರ್ಯಾದಾ ಪುರುಷರು, ಸತ್ಯಹರಿಶ್ಚಂದ್ರರು ಯಾರ್ಯಾರು ಇದ್ದಾರೆ ಗೊತ್ತಾಗಿಹೋಗಲಿ, ತಾವು ಶ್ರೀರಾಮಚಂದ್ರರು ಎಂದು ಕಾಂಗ್ರೆಸ್​ ಮತ್ತು ಜೆಡಿಎಸ್​ ನಾಯಕರು ಮಾತನಾಡುತ್ತಿದ್ದಾರಲ್ಲ. ಅವರಿಗೆ ಒಂದು ಸವಾಲ್ ಹಾಕುತ್ತೇನೆ. 225 ಜನ ಕೂಡ ತನಿಖೆಗೆ ಒಳಪಡಲಿ. ನಿಮ್ಮ ನಿಮ್ಮ ಜೀವನದಲ್ಲಿ ಯಾರು ಅನೈತಿಕ ಸಂಬಂಧ ಇಟ್ಟುಕೊಂಡಿಲ್ಲ ಎಂಬುದು ಸಾಬೀತಾಗಿ ಹೋಗಲಿ ಎಂದರು. ಈ ಸವಾಲು ಇದೀಗ ಎಲ್ಲ ಪಕ್ಷದಲ್ಲಿಯೂ ಭಾರಿ ಕೋಲಾಹಲ ಸೃಷ್ಟಿ ಮಾಡಿದೆ.