ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ: ಇಂದಿನಿಂದ ನಾವು ಹೀಗೆಯೇ ಇರೋದು! ಬಾಲಿವುಡ್ನ ಹಾಟ್ ಬ್ಯೂಟಿಗಳ ಶಪಥ, ನುಡಿದಂತೆ ನಡೆಯಲು ಸಿದ್ಧ | Resolutions
ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, "ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರು ನೀಡುವ ತೊಂದರೆಗಳ ವಿರುದ್ಧ ದೂರು ನೀಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿವನ್ನು ತೆರೆಯಲಾಗಿದೆ. ಜನರು ಇಲ್ಲಿ ತಮ್ಮ ದೂರನ್ನು ಸಲ್ಲಿಸಬಹುದು" ಎಂದು ಹೇಳಿದರು.
ಮನೆಹಾಳು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಮೀಣ ಭಾಗ ಸೇರಿದಂತೆ ರಾಜ್ಯದ ಜನರ ಮೇಲೆ ಹೇರುತ್ತಿರುವ ಒತ್ತಾಯ, ಚಿತ್ರಹಿಂಸೆ ಬಗ್ಗೆ ವಿಜಯವಾಣಿ ವರದಿ ಪ್ರಕಟಿಸಿತ್ತು. ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಈ ಕುರಿತಂತೆ ಸಭೆ ನಡೆಸಿ ಈಗ ಸೂಕ್ತ ಹಾಗೂ ಶಿಸ್ತಿನ ಕ್ರಮಕೈಗೊಳ್ಳಲು ಮುಂದಾಗಿದೆ. "ಮುಂದಿನ ದಿನಗಳಲ್ಲಿ ಇಂತಹ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಹೆದರಿ ಜನರು ಊರು ಬಿಡುವ ಅಗತ್ಯವಿಲ್ಲ. ಬದಲಿಗೆ ದೂರು ಸಲ್ಲಿಸಿ, ನಾವು ಕ್ರಮ ಜರುಗಿಸುತ್ತೇವೆ" ಎಂದು ಸಿಎಂ ಹೇಳಿದ್ದಾರೆ.