ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು (Heavy Rains), ವಾರಗಟ್ಟಲೆ ಬಿಡುವು ಪಡೆದಿದ್ದ ಮಳೆ ಮತ್ತೆ ಗುಡುಗು, ಸಿಡಿಲನೊಂದಿಗೆ ಅಬ್ಬರಿಸುತ್ತಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Forecast) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ.
ಕಳೆದ ಕೆಲ ವಾರಗಳ ಹಿಂದೆ ಬಿಡುವು ಪಡೆದಿದ್ದ ಮಳೆ ಮತ್ತೊಮ್ಮೆ ಗುಡುಗು, ಸಿಡಿಲನೊಂದಿಗೆ ಅಬ್ಬರಿಸುತ್ತಿದ್ದು, ಈ ತಿಂಗಳಾಂತ್ಯದವರೆಗೂ ಸುರಿಯುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಈ ಬಗ್ಗೆ ವರದಿ ಮಾಡಲಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.