ಸಾಂದರ್ಭಿಕ ಚಿತ್ರ  
ನ್ಯೂಸ್

ಹವಾಮಾನ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಐದು ದಿನ ಗುಡುಗು ಮಿಂಚು ಸಹಿತ ಮಳೆ

ಬೆಂಗಳೂರು: ರಾಜ್ಯದ ಕೆಲ ಪ್ರದೇಶಗಳಲ್ಲಿ ಸೋಮವಾರ ಮಳೆ ಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ, ಹುಂಡಿಪುರ ಹಾಗೂ ಮಂಗಳಾದಲ್ಲಿ ಭರ್ಜರಿ ವರ್ಷಧಾರೆಯಾಗಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬಳ್ಳಾರಿ,ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಏ.24ರಿಂದ ಏ.29ರವರೆಗೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಮುಂದಿನ ಮೂರು ದಿನ ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಏ.28ರಿಂದ ಈ ಭಾಗಗಳಲ್ಲಿ ಮಳೆ ಸುರಿಯಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.