ನ್ಯೂಸ್

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆ ಸಾಧ್ಯತೆ; ಕರ್ನಾಟಕ Weather Forecast ಪೂರ್ತಿ ವಿವರ ಇಲ್ಲಿದೆ

ಬೆಂಗಳೂರು: ಕಳೆದ ಒಂದು ವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಮೈ ಕೊರೆಯುವ ಚಳಿ ಶುರುವಾಗಿದ್ದು, ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ನವೆಂಬರ್​ 29ರಿಂದ ಡಿಸೆಂಬರ್​ 02ರವರೆಗೆ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಹಗುರದಿಂದ ಸಾಧಾರಣ. ಮಳೆಯಾಗಲಿದ್ದು, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅದದರಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ವರದಿಯಾಗಿದೆ.